ಪ್ರೀತಿ ಇಲ್ಲದ ಮೇಲೆ - ಜಿ.ಎಸ್.ಶಿವರುದ್ರಪ್ಪ
Submitted by ಶಾಂತಲ on Mon, 2012-04-16 19:21.
ಕವನ | ಜಿ. ಎಸ್. ಶಿವರುದ್ರಪ್ಪ | ಟಿ.ವಿ.ಧಾರಾವಾಹಿ ಟೈಟಲ್ ಹಾಡು | ಭಾವಗೀತೆ
ಸಂಗೀತ: ಪ್ರವೀಣ್ ಗೋಡ್ಖಿಂಡಿ
ಪ್ರೀತಿ ಇಲ್ಲದ ಮೇಲೆ -
ಹೂವು ಅರಳೀತು ಹೇಗೆ?
ಮೋಡ ಕಟ್ಟೀತು ಹೇಗೆ?
ಹನಿಯೊಡೆದು ಕೆಳಗಿಳಿದು
ನೆಲಕ್ಕೆ ಹಸಿರು ಮೂಡೀತು ಹೇಗೆ?
ಪ್ರೀತಿ ಇಲ್ಲದ ಮೇಲೆ -
ಮಾತಿಗೆ ಮಾತು ಕೂಡೀತು ಹೇಗೆ?
ಅರ್ಥ ಹುಟ್ಟೀತು ಹೇಗೆ?
ಬರೀ ಪದಕ್ಕೆ ಪದ ಜತೆಗಿದ್ದ ಮಾತ್ರಕ್ಕೆ
ಪದ್ಯವಾದೀತು ಹೇಗೆ?
ಪ್ರೀತಿ ಇಲ್ಲದ ಮೇಲೆ -
ದಕ್ಷಿಣಾಫ್ರಿಕದ ಕಗ್ಗತ್ತಲಿಗೆ
ಬೆಳಕು ಮೂಡೀತು ಹೇಗೆ?
ಸೆರೆಮನೆಯ ಕಂಬಿಯ ನಡುವೆ
ಕಮರುವ ಕನಸು ಕೊನರೀತು ಹೇಗೆ?
ಬಿಳಿ ಜನರ ಕರಾಳ ಕಪ್ಪು ಹೃದಯಕ್ಕೆ
ಕ್ರಿಸ್ತನ ಕರುಣೆ ಅರ್ಥವಾದೀತು ಹೇಗೆ?
ಪ್ರೀತಿ ಇಲ್ಲದ ಮೇಲೆ -
ಸಂಶಯದ ಗಡಿಗಳುದ್ದಕ್ಕು
ಸಿಡಿಗುಂಡುಗಳ ಕದನ ನಿಂತೀತು ಹೇಗೆ?
ಜಾತಿ-ಮತ-ಭಾಷೆ-ಬಣ್ಣಗಳ ಗೋಡೆಯ ನಡುವೆ
ನರಳುವ ಪಾಡು ತಪ್ಪೀತು ಹೇಗೆ?
ನಮ್ಮ ನಿಮ್ಮ ಮನಸ್ಸು
ಮರುಭೂಮಿಯಾಗದ ಹಾಗೆ
ತಡೆಗಟ್ಟುವುದು ಹೇಗೆ?
ಕೃಪೆ: http://kannadakavyakanaja.blogspot.ca/
» 1890 reads
Recent comments
2 weeks 5 days ago
8 weeks 5 days ago
9 weeks 4 days ago
11 weeks 2 days ago
23 weeks 6 days ago
31 weeks 1 day ago
39 weeks 6 days ago
1 year 4 weeks ago
1 year 7 weeks ago
1 year 11 weeks ago